Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮ್ಕಾ ಶಿಕ್ಷಾ ದಿವ್ನ್ ಸಮಾ ವಾಟೆನ್ ಹಾನಿನಸಲ್ಲೆ ಆಂಗಾಕ್ ಸಮಂದ್ ಪಡಲೆ ಬಾಬಾ ಹಾತ್ ತೆಂಕಾ ಅಮಿ ಮಾನ್ ದಿತಾಂವ್, ತಸೆ ಹೊಲ್ಯಾರ್ ಆತ್ಮಿಕ್ ಬಾಬಾಕ್ ಸ್ವಿಕಾರ್ ಕರುನ್ ಜಿವ್ ಖಮ್ವುನ್ ಘೆವ್ವೆ ನ್ಹಯ್ ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:9
28 ತಿಳಿವುಗಳ ಹೋಲಿಕೆ  

ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವನು ಈ ಜನ ಸಮೂಹದ ಮೇಲೆ ಒಬ್ಬ ಮನುಷ್ಯನನ್ನು ಇಡಲಿ.


ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,


ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.


ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.


ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ. ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.


ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.


ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.


ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.


ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.


ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,


ಆ ಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.


‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು