Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಯೇಸುವು ನಗರದ ಹೊರಗಡೆ ಸಂಕಟವನ್ನು ಅನುಭವಿಸಿದನು. ಆತನು ತನ್ನ ಜನರನ್ನು ಪವಿತ್ರರನ್ನಾಗಿಸಲು, ತನ್ನ ಸ್ವಂತ ರಕ್ತವನ್ನೇ ಅರ್ಪಿಸಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮನುನ್ ಜೆಜುಬಿ ಅಪ್ನಾಚ್ಯಾ ರಗ್ತಾನ್ ಲೊಕಾಕ್ನಿ ಪವಿತ್ರ್ ಕರುಸಾಟಿ ಶಾರಾಚ್ಯಾ ಭಾಯ್ರ್ ಮರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:12
18 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.


ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಯೆಹೋಶುವನೂ ಮತ್ತು ಎಲ್ಲಾ ಇಸ್ರಾಯೇಲ್ಯರೂ, ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡುಹೆಣ್ಣು ಮಕ್ಕಳನ್ನು, ದನ ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರದ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.


ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.


ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.


ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು