Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊಲ್ಯಾರ್ ಜೆಜುಚ್ಯಾ ವೈನಾ ದೆವಾಕ್ ಹೊಗ್ಳಾಪ್ ದಿತಲಿ ಬಲಿ ಅಮಿ ಸದ್ದಿಚ್ ಭೆಟ್ವುವಾ, ಹಿಚ್ ತೆಚೆ ನಾವ್ ಒಪ್ಪುನ್ ಘೆಟಲ್ಲ್ಯಾಂಚ್ಯಾ ಹೊಟ್ಟಾಂಚಿ ಉಪ್ಕಾರ್ ಸ್ತುತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:15
42 ತಿಳಿವುಗಳ ಹೋಲಿಕೆ  

ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.


ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.


ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.


ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.


ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ


ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.


ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು