ಇಬ್ರಿಯರಿಗೆ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ದುಸ್ರ್ಯಾ-ದುಸ್ರ್ಯಾ ಅನಿ ವಿಚಿತ್ರ್ ಶಿಕಾಪಾಕ್ನಿ ಮಳ್ಳ್ ಹೊವ್ನ್ ವ್ಹಾಕ್ಡ್ಯಾ ವಾಟೆಕ್ ಪರ್‍ತುನಕಾಶಿ, ಅಮ್ಚೊ ಭುತ್ತುರ್ಲೊ ಮನ್ ಅಮಿ ಕುರ್ಪೆನ್ ಘಟ್ ಕರಲ್ಲೆ ಬರೆ; ಖಾನಾಚ್ಯಾ ವಿಶಯಾತ್ ಅಸಲ್ಲ್ಯಾ ನೆಮಾ ಸಾರ್ಕೆ ನ್ಹಯ್, ತಿ ಪಾಳ್ಲ್ಯಾರ್ಬಿ ತೆಂಕಾ ತಿ ಕಸ್ಲ್ಯಾಬಿ ಉಪ್ಕಾರಾಕ್ ಪಡುಕ್ನಾತ್. ಅಧ್ಯಾಯವನ್ನು ನೋಡಿ |