Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮರಣಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಶೆ ಮರ್‍ನಾಚ್ಯಾ ಭಿಂಯಾನ್ ಅಪ್ನಾಚ್ಯಾ ಸಗ್ಳ್ಯಾ ಜಿವನ್‍ಭರ್ ಗುಲಾಮ್ ಸಾರ್ಕೆ ಹೊವ್ನ್ ರ್‍ಹಾತಲ್ಯಾಕ್ನಿ ಸುಟ್ಕಾ ಕರುಕ್ ತೊಬಿ ತೆಂಚ್ಯಾ ಸಾರ್ಕೊಚ್ ರಗಾತ್ ಅನಿ ಮಾಸ್ ಭರಲ್ಲೊ ಮಾನುಸ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:15
17 ತಿಳಿವುಗಳ ಹೋಲಿಕೆ  

ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.


ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.


ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.


ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ ಚಿರಂಜೀವಿಯಾಗಿರುವವರು ಯಾರು? ಸೆಲಾ


ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.


ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.


ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.


ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.


ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.


ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು