Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ದೇವದೂತರನ್ನು ಹಿಡಿದವನೆಂದು ಬರೆದಿಲ್ಲ; ಅಬ್ರಹಾಮನ ಸಂತತಿಯನ್ನು ಕೈಹಿಡಿದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನು ಸಹಾಯ ಮಾಡುವುದು ಅಬ್ರಹಾಮನ ಸಂತತಿಯವರಿಗೇ ಹೊರತು ದೇವದೂತರಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ನಿಜವಾಗಿಯೂ ದೂತರಿಗಾಗಿ ಹಾಗೆ ಮಾಡದೆ ಅಬ್ರಹಾಮನ ಸಂತತಿಯವರಿಗಾಗಿ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆಮನುನ್ ದೆವಾಚ್ಯಾ ದುತಾಕ್ನಿ ಮಜತ್ ಕರುಕ್ ಮನುನ್ ತೊ ಯೆವ್ಕ್ ನಾ, ಅಬ್ರಾಹಾಮಾಚ್ಯಾ ಘರಾನ್ಯಾಚ್ಯಾಕ್ನಿ ಮಜತ್ ಕರುಕ್ ಮನುನ್ ತೊ ಯೆಲಾ ಮನ್ತಲೆ ದಿಸುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:16
11 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.


ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.


ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.


ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು