Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆ ಹೊಲ್ಯಾರ್, ಎವ್ಡ್ಯಾ ಮೊಟ್ಯಾ ಸುಟ್ಕೆಚಿ ಪರ್ವಾ ಕರಿನಸ್ತಾನಾ ರ್‍ಹಾಲ್ಯಾರ್ ಅಮ್ಕಾ ಶಿಕ್ಷಾ ಗಾವಿನಸ್ತಾನಾ ರ್‍ಹಾಯ್ಲ್ ಕಾಯ್? ತಿ ಸುಟ್ಕಾ ಧನಿಯಾನುಚ್ ಅದ್ದಿ ಅಮ್ಕಾ ಪರ್ಗಟ್ ಕರಲ್ಲ್ಯಾನ್ ಅನಿ ಧನಿಯಾನ್ ಸಾಂಗಟಲ್ಲೆ ಆಯ್ಕಲ್ಲ್ಯಾನಿ ಮಾನಾ ಅಮ್ಕಾ ತೆಚಿ ಖಾತ್ರಿ ಕರುನ್ ದಿಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:3
42 ತಿಳಿವುಗಳ ಹೋಲಿಕೆ  

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,


ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.


ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,


ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”


ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”


ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.


ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.


ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.


ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು