Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತ್ಯಾಚ್ ವೆಳಾರ್ ದೆವಾನ್ ಸಗ್ಳ್ಯಾ ರಿತಿಚ್ಯಾ ಮೊಟ್ಯಾ ಮೊಟ್ಯಾ ಕಾಮಾಂಚ್ಯಾ ವೈನಾ ಅನಿ ಅಜಾಪಾಂಚ್ಯಾ ತಸೆಚ್ ಅಪ್ನಿ ವಾಟುನ್ ದಿಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ದೆನ್ಗಿಯಾಂಚ್ಯಾ ವೈನಾ ದೆವಾನ್ ತ್ಯಾ ಲೊಕಾನಿ ದಿಲ್ಲಿ ಸಾಕ್ಷಿ ಮಿಳ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:4
18 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.


ಈ ಕಾರ್ಯಗಳಿಗೆ ನಾವು ಸಾಕ್ಷಿ ಹಾಗೂ ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನು ಸಾಕ್ಷಿ” ಎಂದು ಹೇಳಿದರು.


ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.


ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು