Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಕ್ರಿಸ್ತ್ ಲೆಕಾಚ್ಯಾ ಸಾರ್ಕೊ ದೆವಾಚ್ಯಾ ಘರ್ಚೊ ವಿಶ್ವಾಸಾಚೊ ಅದಿಕಾರಿ ಅನಿ ಅಮ್ಕಾ ಗೌರವ್ ಹಾನ್ತಲೊ ವಿಶ್ವಾಸ್ ಅನಿ ಬರೊಸೊ ಅಮಿ ಘಟ್ ಸಂಬಾಳುನ್ ಘೆವ್ನ್ ರಾಲಾಂವ್ ತರ್ ಅಮಿಚ್ ತೆಚೆ ಘರ್ ಹೊತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:6
46 ತಿಳಿವುಗಳ ಹೋಲಿಕೆ  

ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.


ನಿರೀಕ್ಷೆಯ ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ.


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.


ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.


ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.


“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.


ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.


ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.


ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.


ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು