Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತೆಚೆಸಾಟ್ನಿ ದೆವಾಚ್ಯಾ ತ್ಯಾ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸ್ತಾಂವ್ ಮನುನ್ ದೆವಾನ್ ದಿಲ್ಲಿಚಿ ಗೊಸ್ಟ್ ಅಜುನ್‍ಬಿ ಝಿತ್ತಿ ಹಾಯ್ ತಸೆ ಮನುನ್ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸುಕ್ ತುಮ್ಚ್ಯಾತ್ಲ್ಯಾ ಕೊನಾಕ್ಬಿ ನಕ್ಕೊ ಮನ್ತಲೊ ನಿರ್‍ನಯ್ ಗಾವಿಲ್ ಮನ್ತಲ್ಯಾ ಭಿಂಯಾನ್ ಅಮಿ ಹುಶಾರ್ಕಿಕ್ ರಾಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:1
28 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.


ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.


ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.


ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.


ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲ್ವತ್ತು ದಿನಗಳ ಪ್ರಕಾರ, ಒಂದು ದಿನಕ್ಕೆ ಒಂದು ವರ್ಷವಾಗಿ ಈ ಪ್ರಕಾರ ನಲ್ವತ್ತು ವರ್ಷ ನಿಮ್ಮ ಪಾಪಫಲವನ್ನು ಅನುಭವಿಸುವವರಾಗಿ ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳಬೇಕು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು