Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಹೊಲ್ಯಾರ್ ಅಮಿ ಬೊಲುನ್ ಸಾಂಗ್ತಾಂವ್ ತೊ ವಿಶ್ವಾಸ್ ಅಮಿ ಘಟ್ ಸಂಬಾಳುನ್ ಘೆವ್ನ್ ರ್‍ಹಾವ್ವಾ; ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಎಕ್ ಶ್ರೆಸ್ಟ್ ಮೊಟೊ ಯಾಜಕ್ ಹಾಯ್‍, ದೆವಾಚ್ಯಾ ಇದ್ರಾಕ್ ಗೆಲ್ಲೊ ಜೆಜು ದೆವಾಚೊ ಲೆಕ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:14
31 ತಿಳಿವುಗಳ ಹೋಲಿಕೆ  

ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.


ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.


ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು