Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೆ ಹೊಲ್ಯಾರ್ ಗರ್ಜೆಚ್ಯಾ ಅನಿ ತರಾಸಾಚ್ಯಾ ಎಳಾರ್ ಅಮ್ಕಾ ದಯಾ ಅನಿ ಆಧಾರ್ ಘೆವ್ಕ್ ಸಾಟ್ನಿ ಮನುನ್ ಅಮಿ ಧೈರ್‍ಯಾನ್ ದೆವಾಚ್ಯಾ ಕುರ್ಪೆಚ್ಯಾ ಸಿಯಾಸನ್ ಜಾಗ್ಯಾಕ್ಡೆ ಜಗ್ಗೊಳ್ ಜಾಂವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:16
18 ತಿಳಿವುಗಳ ಹೋಲಿಕೆ  

ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.


ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.


ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.


ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು