Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರ ಕೆಲಸಗಳು ಲೋಕಾದಿಯಿಂದ ಮುಗಿದು ಹೋಗಿ [ಆತನ ವಿಶ್ರಾಂತಿಯು ಸಿದ್ಧವಾಗಿದ್ದರೂ] ಆತನು - ನನ್ನ ವಿಶ್ರಾಂತಿಯಲ್ಲಿ ಇವರು ಸೇರುವದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು ಎಂಬದಾಗಿ ಹೇಳಿದೆನಷ್ಟೆ. ನಂಬಿರುವ ನಾವಾದರೋ ಆ ವಿಶ್ರಾಂತಿಯಲ್ಲಿ ಸೇರುತ್ತಲೇ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಅಮಿ ತ್ಯಾ ಗೊಸ್ಟಿಯಾ ಖರ್ಯ್ಯಾ ಮನುನ್ ಮಾನುನ್ ಘೆಟ್ಲ್ಯಾಂವ್, ತಸೆಮನುನ್ ಅಮಿಚ್ ತ್ಯಾ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸ್ತಾಂವ್; ಕಶ್ಯಾಕ್ ಮಟ್ಲ್ಯಾರ್, ತೆನಿ ಅಶೆ ಸಾಂಗ್ಲ್ಯಾನಾಯ್, “ಅಸೆ ಮಾಜ್ಯಾ ರಾಗಾನ್ ಆನ್ ಘಾಲುನ್ ಮಿಯಾ ಮಟ್ಲೊ ಮಿಯಾ ತೆಂಕಾ ಆರಾಮಾಚೆ ಜಿವನ್ ಕರುಕ್ ಮನುನ್ ತಯಾರ್ ಕರಲ್ಲ್ಯಾ ಅರಾಮಾಚ್ಯಾ ಜಿವನಾತ್ ತೆನಿ ಕದ್ದಿಚ್‍ಬಿ ಭುತ್ತುರ್ ಗುಸಿನ್ಯಾತ್”. ಜಗ್ ರಚುನ್ ಹೊಲ್ಲ್ಯಾ ಮಾನಾ ದೆವಾನ್ ಅಪ್ನಾಚೆ ಕಾಮ್ ಸಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:3
15 ತಿಳಿವುಗಳ ಹೋಲಿಕೆ  

ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.


ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಹೀಗಿರಲು ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು ಕೋಪಗೊಂಡು ಪ್ರಮಾಣಮಾಡಿದೆನು.’”


ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು