Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹರ್ ಎಕ್ಲ್ಯಾ ಶ್ರೆಸ್ಟ್ ಯಾಜಕಾಕ್ ಮಾನ್ಸಾಂಚ್ಯಾ ಮದ್ನಾ ಯೆಚುನ್ ಕಾಡ್ತ್ಯಾತ್, ಅನಿ ಮಾನ್ಸಾಂಚ್ಯಾ ತರ್ಪೆನ್ ದೆವಾಚ್ಯಾ ಇದ್ರಾಕ್ ಸೆವಾ ಕರುಕ್, ಪಾಪಾಂಚ್ಯಾ ಸಾಟ್ನಿ ದೆನ್ಗಿಯಾ ಅನಿ ಬಲಿಯಾ ಭೆಟ್ಟುಕ್ ಮನುನ್ ನೆಮ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:1
17 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.


ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.


“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,


ದೇವರ ಸೇವೆಯಲ್ಲಿ ಹೊಗಳಿಕೊಳ್ಳುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು


ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;


ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.


ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು