Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಸೊಡ್ಲ್ಯಾರ್ ತುಮಿ ದುಸ್ರ್ಯಾಕ್ನಿ ಶಿಕ್ವುತಲಿ ಲೊಕಾ ಹೊತಲೆ ಹೊತ್ತೆ, ಖರೆ ದೆವಾಚ್ಯಾ ಅದ್ದಿಚ್ಯಾ ಬಾತ್ಮಿಚಿ ಸಮಜ್ ಅನಿ ಪರ್ತುನ್ ತುಮ್ಕಾ ದಿವ್ಕ್ ಅನಿ ಎಕ್ಲ್ಯಾಚಿ ಗರಜ್ ಪಡಲ್ಲಿ ಹಾಯ್, ಘಟ್ಲ್ಯಾ ಜೆವ್ನಾಚ್ಯಾ ಬದ್ಲಾಕ್ ತುಮ್ಕಾ ಅಜುನ್‍ಬಿ ದುದ್ದಾಚಿ ಗರಜ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:12
23 ತಿಳಿವುಗಳ ಹೋಲಿಕೆ  

ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.


ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.


“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.


ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.


ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.


ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.


ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.


ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.


ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.


ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು