Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜೆಜು ಹ್ಯಾ ಜಗಾತ್ ಹೊತ್ತೊ ತನ್ನಾ ಅಪ್ನಾಕ್ ಮರ್‍ನಾತ್ನಾ ಹುರ್‍ವುಕ್ ಬಳ್‍ ಹೊತ್ತ್ಯಾಕಡೆ ಬೊಬ್ ಮಾರುನ್ ಅನಿ ಡೊಳ್ಯಾನಿತ್ನಾ ದುಕ್ಕಾ ಗಳ್ವುನ್ ಮಾಗ್ನಿಯಾ ಅನಿ ವಿನಂತ್ಯಾ ಕರುಕ್‍ಲಾಲೊ, ತೆಚ್ಯಾ ಮಾನಾಚ್ಯಾ ಖಾಲ್ತಿಪಾನಾ ಸಾಟ್ನಿ ದೆವಾನ್ ತೆಚಿ ಮಾಗ್ನಿ ಆಯಿಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:7
38 ತಿಳಿವುಗಳ ಹೋಲಿಕೆ  

ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.


ಮೂರು ಗಂಟೆಗೆ ಯೇಸು, “ಎಲೋಹಿ, ಎಲೋಹಿ, ಲಮಾಸಬಕ್ತಾನೀ?” ಅಂದರೆ “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದನು.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಯೇಸು ಕಣ್ಣೀರಿಟ್ಟನು.


ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣ ಬಿಟ್ಟನು.


ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.


ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.


ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.


ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು