Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನಿ ಆಳಸ್ಪಾನಾನ್, ದೆವಾಚ್ಯಾ ಗೊಸ್ಟಿಯಾಂಚೆ ಫಳ್ ಘೆತಲಿ ಲೊಕಾ ತುಮಿ ಹೊವ್ನ್ ರ್‍ಹಾವ್ಚೆ ಮನುನ್ ಅಮಿ ಆಶ್ಯಾ ಕರ್ತಾಂವ್ ತ್ಯಾ ಲೊಕಾಕ್ನಿ ವಿಶ್ವಾಸ್, ಅನಿ ತಾಳ್ಮೆ ಹೊತ್ತ್ಯಾಕ್ ತೆನಿ ದೆವಾಚ್ಯಾ ಗೊಸ್ಟಿಯಾಂಚ್ಯಾ ಸಾರ್ಕೆ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:12
36 ತಿಳಿವುಗಳ ಹೋಲಿಕೆ  

ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.


ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.


ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.


ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.


ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು.,


ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.


ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.


ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.


ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?


ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.


ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.


ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು