Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಸೆಚ್ ದೆವಾನ್ ಅಪ್ಲೊ ಉದ್ದೆಸ್ ಘಟ್ ಹಾಯ್ ಮನ್ತಲೆ ತೆಬಿ ಭೊಮಾನಾ ಘೆಟಲ್ಯಾಕ್ನಿ ದಾಕ್ವುಚೆ ಮನುನ್ ಅಪ್ಲಿ ಗೊಸ್ಟ್ ಥವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:17
31 ತಿಳಿವುಗಳ ಹೋಲಿಕೆ  

ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.


“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.


ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.


ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.


ನೀವು ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ, ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು