Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನಯಾಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮೆಲ್ಕಿಜೆದೆಕಾಚ್ಯಾ ಪಂಗಡಾ ನಮನಿ ಜೆಜು ಕನ್ನಾಬಿ ರ್‍ಹಾತಲೊ ಯಾಜಕ್ ಹೊವ್ನ್ ಜಾವ್ನ್ ತ್ಯಾ ಜಾಗ್ಯಾರ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:20
20 ತಿಳಿವುಗಳ ಹೋಲಿಕೆ  

ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ.


ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.


ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು