Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಕರ್ತನು ಯೆಹೂದ ಕುಲದಲ್ಲಿ ಜನಿಸಿದವನೆಂಬದು ಪ್ರಸಿದ್ಧವಾಗಿದೆಯಷ್ಟೆ; ಈ ಕುಲದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಒಂದು ಮಾತನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚೊ ಧನಿ ಜುದೆವಾಚ್ಯಾ ಘರಾನಾಕ್ನಾ ಯೆಲ್ಲೊ ಮನ್ತಲೆ ಚೊಕ್ಕ್ ದಿಸುನ್ ಯೆಲಾ ತ್ಯಾ ಘರಾನಾಕ್ ಸಮಂದ್ ಪಡಲ್ಯಾ ಯಾಜಕಾಂಚ್ಯಾ ವಿಶಯಾತ್ ಮೊಯ್ಜೆನ್ ಕಾಯ್ಬಿ ಸಾಂಗುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:14
22 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು;


“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?


ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.


ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.


ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


ಆದರೆ ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ.


ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು