Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮೊಯ್ಜೆಚ್ಯಾ ಖಾಯ್ದ್ಯಾನ್ ಖಲೆಬಿ ಸಂಪುರ್ನತೆಕ್ ಹಾನುಕ್ ನಾ ಅತ್ತಾ ಅಮ್ಕಾ ಬರಿ ಖಬರ್ ಅನಿ ಬರೊಸೊ ದೆವಾಚ್ಯಾ ಜಗೊಳ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:19
29 ತಿಳಿವುಗಳ ಹೋಲಿಕೆ  

ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.


ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?


ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.


ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು.


ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು