Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಆಣೆಯೊಡನೆಯೇ ಯಾಜಕನಾದದರಿಂದ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಶ್ರೇಷ್ಠವಾದ ಒಡಂಬಡಿಕೆಗೆ ಯೇಸುವೇ ಆಧಾರ ಎಂಬುದೇ ಇದರರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವಾನ್ ಅಪ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಕರಲ್ಯಾ ಒಪ್ವಂದಾಕ್ ಜೆಜು ಕ್ರಿಸ್ತುಚ್ ಆಧಾರ್ ಮನ್ತಲೊ ಹೆಚೊ ಅರ್ಥ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:22
17 ತಿಳಿವುಗಳ ಹೋಲಿಕೆ  

ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.


ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.


ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,


ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು, ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.


ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.


ಲೇವಿಯರು ಶಾಶ್ವತವಾಗಿ ಉದ್ಯೋಗನಡಿಸುವುದಕ್ಕೆ ಮರಣವು ಅಡ್ಡಿಯಾಗಿರುವುದರಿಂದ ಅವರಲ್ಲಿ ಅನೇಕರು ಯಾಜಕರಾದರು.


ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು