ಇಬ್ರಿಯರಿಗೆ 7:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪಪರಿಹಾರಕ್ಕಾಗಿ ಸಮರ್ಪಣೆಮಾಡುವ ಲೇವಿಕ ಮಹಾಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸಬೇಕಾದ ಅವಶ್ಯವಿಲ್ಲ. ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಯಾಜಕ್ ಸದ್ದಿಬಿ ಬಲಿ ಭೆಟ್ವುಚೆ ಹೊಲ್ಲೆ ತೆನಿ ಅಪ್ಲ್ಯಾ ಸ್ವತಾಚ್ಯಾ ಪಾಪಾಕ್ನಿ ಬಲಿ ಭೆಟ್ವುನ್ ಮಾನಾ ಲೊಕಾಂಚ್ಯಾ ಪಾಪಾಕ್ನಿ ಬಲಿ ಭೆಟ್ವುಚೆ, ಹೊಲ್ಯಾರ್ ಜೆಜು ತೆಂಚ್ಯಾ ಸಾರ್ಕೊ ನ್ಹಯ್, ತೆನಿ ಅಪ್ನಾಕುಚ್ ಬಲಿ ಕರುನ್ ಕುರ್ಸಾರ್ ಒಪ್ಸುನ್ ದಿವ್ನ್ ಎಕುಚ್‍ದಾ ಬಲಿ ಕರ್‍ತಲೆ ಕಾಮಾ ಕರುನ್ ಸಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |