Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ತುಮ್ಕಾ ಸಾಂಗಲ್ಲೆ ಕಾಯ್ ಮಟ್ಲ್ಯಾರ್, ಅಮ್ಕಾ ಎಕ್ ಮೊಟೊ ಯಾಜಕ್ ಹಾಯ್ ಅನಿ ತೊ ಸರ್‍ಗಾತ್ ದೆವಾಚ್ಯಾ ಸಿವಾಸನಾಚ್ಯಾ ಉಜ್ಜ್ಯಾ ಭಾಜುಕ್ ಅತ್ತಾ ಬಸುನ್ ಹಾಯ್ ಮನ್ತಲೆ ಅಮಿ ತುಮ್ಕಾ ಸಾಂಗ್ತಲೆ ಮುಖ್ಯ್ ಹೊಲ್ಲಿ ಖಬರ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:1
21 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.


ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ಆದರೆ ಯಾವ ದೇವದೂತನಿಗಾದರೂ ದೇವರು, “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ?


ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.


ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.


ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು