ಇಬ್ರಿಯರಿಗೆ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ದೆವಾನ್ ಹೆ ನ್ಹವೊ ಕರಾರ್ ಕನ್ನಾಬಿ ಮನುನ್ ಸಾಂಗ್ಲ್ಯಾನ್, ತಸೆ ಹೊವ್ನ್ ಅದ್ದಿಚೊ ಕರಾರ್ ಜಿರ್ನ್ ಹೊವ್ನ್ ನಸ್ಟ್ ಹೊತಾ . ಅಧ್ಯಾಯವನ್ನು ನೋಡಿ |