Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೊಲ್ಯಾರ್ ಅತ್ತಾ ಜೆಜು ಕ್ರಿಸ್ತಾಕ್ ದಿಲ್ಲೆ ಕಾಮ್ ತ್ಯಾ ಯಾಜಕಾಕ್ನಿ ದಿಲ್ಲ್ಯಾ ಕಾಮಾನ್‍ಬಿ ಲೈ ಕಿಮ್ತಿಚೆ ಹಾಯ್, ತಸೆಚ್ ಜೆಜುನ್ ಅಪ್ಲ್ಯಾ ಲೊಕಾಕ್ನಿ ದೆವಾಕ್ನಾ ಹಾನಲೊ ನ್ಹವೊ ಕರಾರ್ ಜುನ್ನಾಚ್ಯಾನ್ಬಿ ಕಿಮ್ತಿಚೊ, ಬರ್‍ಯಾ ಸಂಗ್ತಿಯಾಂಚ್ಯಾ ಗೊಸ್ಟಿಯಾ ವೈನಿ ನ್ಹವೊ ಕರಾರ್ ತಯಾರ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:6
13 ತಿಳಿವುಗಳ ಹೋಲಿಕೆ  

ಯೇಸು ಪ್ರತಿಜ್ಞೆಯೊಡನೆಯೇ ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರನಾದನು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು