ಇಬ್ರಿಯರಿಗೆ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹಳೆಯ ಒಡಂಬಡಿಕೆಯಲ್ಲಿ ದೇವಾರಾಧನೆಗೆ ವಿಧಿನಿಯಮಗಳಿದ್ದವು; ಮಾನವ ನಿರ್ಮಿತ ದೇವಾಲಯವೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗಿದ್ದರೂ ಮೊದಲನೆಯ ಒಡಂಬಡಿಕೆಯಲ್ಲಿ ದೇವಾರಾಧನೆಯ ನಿಯಮಗಳಿದ್ದವು; ಮತ್ತು ದೇವಾಲಯವಿತ್ತು, ಅದು ಇಹಲೋಕ ಸಂಬಂಧವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅದ್ದಿಚ್ಯಾ ಕರಾರಾತ್ ಆರಾಧನ್ಯಾಕ್ ನೆಮಾ ಹೊತ್ತಿ, ಅನಿ ಆರಾಧನ್ಯಾಕ್ ಮನುನ್ ಮಾನ್ಸಾನ್ ಕರಲೆ ಜಾಗೆಬಿ ಹೊತ್ತೆ. ಅಧ್ಯಾಯವನ್ನು ನೋಡಿ |
ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.