ಇಬ್ರಿಯರಿಗೆ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಕ್ರಿಸ್ತನು ಈಗ ದೊರೆತಿರುವ ಮೇಲುಗಳನ್ನು ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಸೃಷ್ಟಿಗೆ ಸಂಬಂಧಪಡದಂಥ ಘನವಾಗಿಯೂ ಉತ್ಕೃಷ್ಟವಾಗಿಯೂ ಇರುವ ಗುಡಾರದಲ್ಲಿ ಸೇವೆಯನ್ನು ಮಾಡುವವನಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕ್ರಿಸ್ತ್ ಅತ್ತಾ ಹಾಲಿ ಮುಖ್ಯ್ ಯಾಜಕ್ ಹೊವ್ನ್ ಯೆಲಾ, ಅತ್ತಾ ಅಮ್ಕಾ ಗಾವಲ್ಯಾ ಬರ್‍ಯಾ ಸಂಗ್ತಿಯಾಕ್ನಿ ತೊಚ್ ಮೊಟೊ ಯಾಜಕ್ ಹೊಲ್ಲೊ ಹಾಯ್, ಹುರಲ್ಲಿ ಯಾಜಕಾ ಸಗ್ಳಿ ದೆವಾಚ್ಯಾ ಗುಡಿತುಚ್ ಸೆವಾ ಕರಲಿ, ಕ್ರಿಸ್ತ್ ದೆವಾಚ್ಯಾ ಗುಡಿತ್ ಸೆವಾ ಕರಿನಸ್ತಾನಾ ತೆಚ್ಯಾಕ್ಕಿಂತಾಬಿ ಅಗ್ದಿ ಬರ್‍ಯಾ ಜಾಗ್ಯಾರ್ ಸೆವಾ ಕರ್‍ತಲೊ ತೆ ಪರಿಪುರ್ನ್ ಹೊಲ್ಲೆ ಮಾನ್ಸಾಕ್ನಾ ತಯಾರ್ ಹೊಲ್ಲೆ ನ್ಹಯ್, ಹ್ಯಾ ಜಗಾಕ್ ಮಿಳುಕ್ ಬಿ ನ್ಹಯ್. ಅಧ್ಯಾಯವನ್ನು ನೋಡಿ |