Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಹೊವ್ನ್, ಕ್ರಿಸ್ತಾಚೆ ರಗಾತ್ ತೆಚ್ಯಾಕಿಂತಾಬಿ ಜಾಸ್ತಿಚೆಚ್ ಕರ್‍ತಾ, ಕ್ರಿಸ್ತಾನ್ ಕನ್ನಾಬಿ ರಾತಲ್ಯಾ ಆತ್ಮ್ಯಾಕ್ನಾ ಅಪ್ನಾಕುಚ್ ಅಪ್ನಿ ದೆವಾಚೊ ಯಜ್ನ್ ಕರುನ್ ದಿಲ್ಯಾನ್, ತೆಚೆ ರಗಾತ್ ಅಮ್ಕಾ ಅಮಿ ಬುರ್ಶ್ಯಾ ಕಾಮಾನಿತ್ನಾ ಸುಟ್ಕಾ ಕರುನ್ ಘೆವ್ನ್ ಜಿವ್ ಹೊತ್ತ್ಯಾ ದೆವಾಕ್ ಆರಾದನ್ ಕರುಕ್ ಹೊಯ್ ಸಾರ್ಕೆ ಅಮ್ಚೊ ಮನ್ ಚೊಕ್ಕ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:14
76 ತಿಳಿವುಗಳ ಹೋಲಿಕೆ  

ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.


ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.


ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.


ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.


ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ಕುಂದುಕೊರತೆ ಇರುವಂಥದ್ದನ್ನು ತರಬಾರದು; ಅಂಥದು ಸಮರ್ಪಣೆ ಆಗುವುದಿಲ್ಲ.


ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.


ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.


ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.


ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.


ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?


ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;


“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.


ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.


ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?


“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.


ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.


ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು