ಇಬ್ರಿಯರಿಗೆ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೋಶೆಯು ದೇವರ ವಿಧಿಗಳನ್ನೆಲ್ಲಾ ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೆ, ಹಿಸ್ಸೋಪು ಕಡ್ಡಿ ಇವುಗಳೊಂದಿಗೆ ಹೋರಿಕರಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅದ್ದಿ ಮೊಯ್ಜೆಚೆ ಖಾಯ್ದ್ಯಾಚೆ ಹುಕುಮ್ ಲೊಕಾಕ್ನಿ ಕಳ್ವುಲ್ಯಾನ್, ತೆಚ್ಯಾ ಮಾನಾ ಪಾಡ್ಕ್ಯಾಂಚೆ ಅನಿ ಪಾಲ್ವ್ಯಾಂಚೆ ರಗಾತ್ ಘೆವ್ನ್ ಪಾನಿಯಾತ್ ಮಿಳ್ವುಲ್ಯಾನ್, ಪಾನಿ, ಅನಿ ರಗಾತ್ ಪವಿತ್ರ್ ಪುಸ್ತಕಾತ್ ಅನಿ ಲೊಕಾಂಚೆರ್ ಹೆ ಸಿಪ್ಡುಕ್ ತಾಂಬ್ಡೊ ಕಾಪುಸ್ ಅನಿ ಹಿಸ್ಸೊಪ್ ಝಾಡಾಚಿ ಟಾಳಿ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |