Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪರಲೋಕವಸ್ತುಗಳಿಗೆ ಪ್ರತಿರೂಪವಾಗಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಸಾಕ್ಷಾತ್ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹಿ ಸಾಮಾನ್ ಸರ್ಗಾತ್ಲ್ಯಾ ಸಾಮಾನಾಂಚಿ ಸಾವ್ಳಿ ಹೊವ್ನ್ ಹಾತ್, ಹೆ ಜನಾವರಾಂಚ್ಯಾ ಯಜ್ಞಾನಿ ಪರಿಶುದ್ದ್ ಕರುಚೆ ಹೊಲ್ಯಾರ್ ಸರ್ಗಾತ್ಲ್ಯಾ ಖರ್‍ಯಾ ಸಾಮಾನಾ ಸಾಟ್ನಿ ಬರೊ ಯಜ್ನ್ ಒಪ್ಸುಚೆ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:23
14 ತಿಳಿವುಗಳ ಹೋಲಿಕೆ  

ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.


ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,


ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.


ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.


ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು