ಇಬ್ರಿಯರಿಗೆ 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಜುದೆವಾಂಚೊ ಮೊಟೊ ಯಾಜಕ್ ವರ್ಸಾಕ್ ಎಗ್ದಾ ಅಗ್ದಿ ಪವಿತ್ರ್ ಜಾಗ್ಯಾರ್ ಜಾತಾನಾ ಜನಾವರಾಂಚೆ ರಗಾತ್ ಅಪ್ಲ್ಯಾ ವಾಂಗ್ಡಾ ದೆವಾಕ್ ಒಪ್ಸುಕ್ ಮನುನ್ ಘೆವ್ನ್ ಜಾಯ್ತ್, ಖರೆ ಕ್ರಿಸ್ತ್ ಪರ್ತುನ್ ಭೆಟ್ಟುಕ್ ಮನುನ್ ಜಾವ್ಕ್ ನಾ. ಅಧ್ಯಾಯವನ್ನು ನೋಡಿ |