Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕ್ರಿಸ್ತಾನ್ ಲೈಂದಾ ಅಪ್ನಾಕ್ ಒಪ್ಸುನ್ ಘೆಟಲ್ಲೆ ಹೊಲ್ಯಾರ್ ಹ್ಯೊ ಜಗ್ ತಯಾರ್ ಹೊಲ್ಲ್ಯಾಕ್ನಾ ತೊ ಲೈಂದಾ ತರಾಸ್ ಕರುನ್ ಘೆವ್ಚೊ ಹೊತ್ತೊ, ಖರೆ ಕ್ರಿಸ್ತಾನ್ ಜಗಾಚ್ಯಾ ಸರ್ತಲ್ಯಾ ದಿಸಾತ್ನಿ ಪಾಪ್ ನಾ ಕರುಚೆ ಮನುನ್ ಅಪ್ನಾಕ್ ಎಕುಚ್ ದಾ ಒಪ್ಸುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:26
36 ತಿಳಿವುಗಳ ಹೋಲಿಕೆ  

ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.


ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.


ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.


ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು