Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:1
23 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.


ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.


ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.


ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಕನಸು ಕಂಡು ತತ್ತರಗೊಂಡನು, ಅವನಿಗೆ ನಿದ್ರೆ ತಪ್ಪಿತು.


ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.


ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.


ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.


ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.


ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಅವರೊಂದಿಗೆ ಪಾರಸಿಯರು, ಕೂಷ್ಯರು, ಪೂಟ್ಯರು ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.


ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,


ದಾನಿಯೇಲನು ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿ ಸೇವಕನಾಗಿಯೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು