Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು . ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:8
10 ತಿಳಿವುಗಳ ಹೋಲಿಕೆ  

ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.


ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,


ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.


ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು