Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9-10 ಆ ಸಾಮಾನುಗಳ ಪಟ್ಟಿ ಹೀಗಿದೆ :- ಬಂಗಾರದ ಬೋಗುಣಿಗಳು 30 ಬೆಳ್ಳಿಯ ಬೋಗುಣಿಗಳು 1000 ಇತರ ಬೋಗುಣಿಗಳು 29 ಚಿನ್ನದ ಬಟ್ಟಲುಗಳು 30 ಕಡಿಮೆ ಮಟ್ಟದ ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1000

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಸಾಮಾನುಗಳ ಲೆಕ್ಕ - ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:9
14 ತಿಳಿವುಗಳ ಹೋಲಿಕೆ  

ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.


ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.


ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ


ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.


ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ.


ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,


ಆ ಯಾಜಕರೂ ಮತ್ತು ಲೇವಿಯರೂ, ಯೆರೂಸಲೇಮಿನ ದೇವಾಲಯಕ್ಕೆ ತಲುಪಿಸುವುದಕ್ಕೋಸ್ಕರ ಬೆಳ್ಳಿಬಂಗಾರವನ್ನೂ, ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು