ಎಜ್ರ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಸಾಹೇಲನ ಮಗ ಯೋನಾತಾನ್, ಹಾಗು ತಿಕ್ವನ ಮಗ ಯಹ್ಜೆಯ ಎಂಬವರು ಮಾತ್ರ. ಈ ಅಭಿಪ್ರಾಯವನ್ನು ವಿರೋಧಿಸಿದರು. ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರನ್ನು ಬೆಂಬಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಸಾಹೇಲನ ಮಗನಾದ ಯೋನಾತಾನ್, ತಿಕ್ವನ ಮಗನಾದ ಯಹ್ಜೆಯ ಎಂಬವರು ಮಾತ್ರ ಈ ಅಭಿಪ್ರಾಯವನ್ನು ವಿರೋಧಿಸಿದರು; ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರ ಪಕ್ಷವನ್ನು ಹಿಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಅಸಾಯೇಲನ ಮಗ ಯೋನಾತಾನ್ ಹಾಗು, ತಿಕ್ವನ ಮಗ ಯಹ್ಜೆಯ ಇದನ್ನು ವಿರೋಧಿಸಿದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈನೂ ಅವರನ್ನು ಬೆಂಬಲಿಸಿದರು. ಅಧ್ಯಾಯವನ್ನು ನೋಡಿ |
ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.