Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರು, ಏಳನೆಯ ತಿಂಗಳಿನಲ್ಲಿ ಏಕ ಮನಸ್ಸಿನಿಂದ ಜೆರುಸಲೇಮಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ಯರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇವಿುಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಮ್ಮತಮ್ಮ ಸ್ವಂತ ಊರುಗಳಲ್ಲಿ ಹೋಗಿ ನೆಲೆಸಿದ್ದ ಇಸ್ರೇಲರು ಏಳನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಒಂದೇ ಮನಸ್ಸಿನಿಂದ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:1
16 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


“ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.


ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.


ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು