Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೆಹಾಯರು, ಏಲಾಮ್ಯರು ಇವರೂ ಮಹಾ ಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರೂ ಇತ್ಯಾದಿ ಶಿರೋಲೇಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮತ್ತು ಮಹಾ ಬಲಿಷ್ಠನಾದ ಅಷೂರ್ ಬನಿಪಾಲನು ಕರೆತಂದು ಸಮಾರ್ಯ ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ಇರಿಸಿದ ಇತರ ಜನರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:10
8 ತಿಳಿವುಗಳ ಹೋಲಿಕೆ  

ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,


ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.


ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು