Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವಂತು ಅರಮನೆಯ ಉಪ್ಪನ್ನು ಉಣ್ಣುವವರಾದದರಿಂದ ಅರಸರಿಗೆ ಅಪಮಾನವುಂಟಾಗುವದನ್ನು ನೋಡಿ ಸುಮ್ಮನಿರುವದು ಉಚಿತವಲ್ಲವೆಂದು ತಿಳಿದು ಅರಸರಿಗೆ ಈ ಪತ್ರಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದ್ದರಿಂದಲೇ ರಾಜರಿಗೆ ಈ ಪತ್ರವನ್ನು ಕಳುಹಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:14
5 ತಿಳಿವುಗಳ ಹೋಲಿಕೆ  

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು