ಎಜ್ರ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು, ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬದೂ ಆ ಕಾರಣದಿಂದಲೇ ಹಾಳುಮಾಡಲ್ಪಟ್ಟಿತೆಂಬದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ. ಅಧ್ಯಾಯವನ್ನು ನೋಡಿ |
ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.