Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ - ನಿಮ್ಮೊಡನೆ ಕಟ್ಟುವದಕ್ಕೆ ನಮಗೂ ಅಪ್ಪಣೆಯಾಗಲಿ; ಯಾಕಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರಾಗಿದ್ದೇವೆ; ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಾರ್ಪಣೆಮಾಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:2
19 ತಿಳಿವುಗಳ ಹೋಲಿಕೆ  

ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.


ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.


ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು