ಎಜ್ರ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು. ಅಧ್ಯಾಯವನ್ನು ನೋಡಿ |
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.