Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದರಲ್ಲಿ - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬೆಲಿನವರು, ಶೂಷನಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:9
16 ತಿಳಿವುಗಳ ಹೋಲಿಕೆ  

“ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.


ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.


ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.


ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.


ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.


ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.


ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.


ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು