Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ನಮಗೆ, ‘ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ಪುನಃ ಕಟ್ಟುತ್ತಿದ್ದೇವೆ. ಇಸ್ರಾಯೇಲರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ನಮಗೆ - ನಾವು ಪರಲೋಕ ಭೂಲೋಕಗಳ ದೇವರ ಸೇವಕರು. ಅನೇಕಾನೇಕ ವರುಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರಿಗಿ ಕಟ್ಟುತ್ತಿರುತ್ತೇವೆ. ಇಸ್ರಾಯೇಲ್ಯರ ಒಬ್ಬ ಮಹಾರಾಜನು ಅದನ್ನು ಕಟ್ಟಿಸಿ ತೀರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಅವರು ಈ ರೀತಿಯಾಗಿ ಉತ್ತರಕೊಟ್ಟರು: “ಭೂಪರಲೋಕಗಳ ದೇವರ ಸೇವಕರಾದ ನಾವು ಬಹಳ ವರ್ಷಗಳ ಹಿಂದೆ ಇಸ್ರೇಲರ ರಾಜನು ಕಟ್ಟಿಸಿ ಮುಗಿಸಿದ ದೇವಾಲಯವನ್ನು ಮತ್ತೆ ಕಟ್ಟುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:11
17 ತಿಳಿವುಗಳ ಹೋಲಿಕೆ  

ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;


“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಅವರಲ್ಲಿ ಪ್ರಧಾನರಾದವರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕೋಸ್ಕರ ಅವರ ಹೆಸರುಗಳನ್ನು ಕೇಳಿದೆವು.


ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.


ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,


ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು