Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನಿಗೆ - ಈ ಸಾಮಾನುಗಳನ್ನು ಯೆರೂಸಲೇವಿುನ ದೇವಾಲಯದಲ್ಲಿಡುವದಕ್ಕೋಸ್ಕರ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ತಿರಿಗಿ ಅದರ ಸ್ಥಳದಲ್ಲಿ ಕಟ್ಟಿಸು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅರಸನಾದ ಸೈರಸನು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ), “ಈ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಜೆರುಸಲೇಮಿನ ದೇವಾಲಯದಲ್ಲಿಡು. ಹಿಂದೆ ದೇವಾಲಯವು ಎಲ್ಲಿ ಇತ್ತೋ ಅದೇ ಸ್ಥಳದಲ್ಲಿ ಅದನ್ನು ಪುನಃ ಕಟ್ಟು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನಿಗೆ, ‘ಈ ಸಾಮಗ್ರಿಗಳನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿರುವ ದೇವಾಲಯಕ್ಕೆ ತೆಗೆದುಕೊಂಡು ಹೋಗು. ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟು,’ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:15
5 ತಿಳಿವುಗಳ ಹೋಲಿಕೆ  

ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.


ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.


ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು