ಎಜ್ರ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು. ಅಧ್ಯಾಯವನ್ನು ನೋಡಿ |
ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.