ಎಜ್ರ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದಾರ್ಯಾವೆಷರಾಜರಿಗೆ ಸರ್ವಥಾಕ್ಷೇಮ. ನಾವು ಯೆಹೂದಸೀಮೆಗೆ ಹೋಗಿ ಮಹೋನ್ನತದೇವರ ಆಲಯವನ್ನು ನೋಡಿದೆವೆಂಬದಾಗಿ ರಾಜರಿಗೆ ಅರಿಕೆ ಮಾಡುತ್ತೇವೆ. ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ ಮುಂದರಿದು ಅವರ ಕೈಯಿಂದ ಬೆಳೆಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ. ಅಧ್ಯಾಯವನ್ನು ನೋಡಿ |