ಎಜ್ರ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮತ್ತು ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವದಕ್ಕೂ ಯೆರೂಸಲೇವಿುನ ದೇವಾಲಯವನ್ನು ನಾಶಮಾಡುವದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ಕೆಡವಿಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಆಲಸ್ಯವಿಲ್ಲದೆ ಕೈಕೊಳ್ಳಬೇಕು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು. ಅಧ್ಯಾಯವನ್ನು ನೋಡಿ |