ಎಜ್ರ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸೆರೆಯಿಂದ ಬಂದ ಇಸ್ರಾಯೇಲ್ಯರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕ ಭೋಜನಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು, ಅಧ್ಯಾಯವನ್ನು ನೋಡಿ |